ಕರ್ನಾಟಕ ಸರಕಾರವು ದ್ವಿಭಾಷಾ ಫಾಂಟ್ (bilingual font) ಗೆ ಸಂಕೇತಗಳನ್ನು ನಿಗದಿಪಡಿಸಲು ಹೊರಟಿದ್ದು ನಿಮಗೆ ತಿಳಿದಿರಬಹುದು. ಸರಕಾರಕ್ಕೆ ನಾನು ಬರೆದ ಪತ್ರ ಇಲ್ಲಿದೆ -
Pavanaja's blog
ಎಲ್ಲರೂ ಮುಂದೆ, ನಾನೊಬ್ಬ ಹಿಂದೆ
ಕರ್ನಾಟಕ ಸರಕಾರದ ನೀತಿಯೇನೆಂದರೆ ಜಗತ್ತೆಲ್ಲ ಮುಂದೆ ಮುಂದೆ ಸಾಗುತ್ತಿರಲಿ, ನಾನೊಬ್ಬ ಮಾತ್ರ ಹಿಂದೆ ಹಿಂದೆ
ಕನ್ನಡ ಬ್ಲಾಗೋತ್ತಮರ ಸಭೆ
ಕನ್ನಡ ಭಾಷೆಯಲ್ಲಿ ಬ್ಲಾಗಿಸುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದು ನಿಜಕ್ಕೂ ಸಂತಸದ ಸುದ್ದಿ. ಈ ಎಲ್ಲ ಬ್ಲಾಗೋತ್ತಮರುಗಳು ಎಂದಾದರೂ ಮುಖಾಮುಖಿ ಭೇಟಿಯಾದುದು ಇದೆಯೇ? ಬಹುಶಃ ಇಲ್ಲ. ಕೆಲವು ಮಂದಿ ಅಲ್ಲಿ ಇಲ್ಲಿ ಭೇಟಿಯಾಗಿರಬಹುದು. ಆದರೆ ಬ್ಲಾಗಿಗಳೇ ಪ್ರತ್ಯೇಕವಾಗಿ ಸಭೆ ಸೇರಿದ್ದು ಇಲ್ಲ. ಭಾರತೀಯ ಬ್ಲಾಗಿಗಳ ಸಭೆ ಹಲವು ಬಾರಿ ಬೇರೆ ಬೇರೆ ನಗರಗಳಲ್ಲಿ ಜರುಗಿವೆ. ಆದರೆ ಕನ್ನಡ ಬ್ಲಾಗಿಗಳ ಸಭೆ ಇದುವರೆಗೆ ಜರುಗಿಲ್ಲ.
ಬೆಂಗಳೂರಿನಲ್ಲಿ ಮೈಕೇಲ್ ಕಪ್ಲಾನ್
ಮೈಕೇಲ್ ಕಪ್ಲಾನ್ ಮೈಕ್ರೋಸಾಫ್ಟ್ ಕಂಪೆನಿಯಲ್ಲಿ ತಂತ್ರಾಂಶಗಳ ಜಾಗತೀಕರಣ ವಿಭಾಗದಲ್ಲಿ ಪ್ರಮುಖ ಹುದ್ದೆಯಲ್ಲಿರುವ ತಂತ್ರಜ್ಞರು. ತಂತ್ರಾಂಶ ಜಾಗತೀಕರಣ ವಿಷಯದಲ್ಲಿ ಕೆಲಸ ಮಾಡುತ್ತಿರುವವರು ಮಾತ್ರವಲ್ಲದೆ ಈ ವಿಷಯದಲ್ಲಿ ಆಸಕ್ತಿ ಹೊಂದಿರುವ ಎಲ್ಲರಿಗೂ ಇವರ ಹೆಸರು ಪರಿಚಯವಿದೆ. ಇವರು ಭಾರತಕ್ಕೆ ಬರುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿರುವ ಮೈಕ್ರೋಸಾಫ್ಟ್ ಸಂಶೋದನಾ ಕೇಂದ್ರದ ಮೂಲಕ ತಿಳಿದು ಬಂತು. ಕೂಡಲೇ ನಾನು ಕಪ್ಲಾನರನ್ನು ಸಂಪರ್ಕಿಸಿ ನಮ್ಮ ಬೆಂಗಳೂರಿನ ಡಾಟ್‌ನೆಟ್ ಬಳಕೆದಾರರ ಸಂಘದಲ್ಲಿ ಒಂದು ಭಾಷಣ ನೀಡಲು ಸಾಧ್ಯವೇ ಎಂದು ಕೇಳಿಕೊಂಡೆ. ಕೂಡಲೇ ಅವರಿಂದ ಉತ್ತರ ಬಂತು "ಇದು ನನಗೆ ನೀಡುತ್ತಿರುವ ಗೌರವ ಎಂದು ಭಾವಿಸಿಕೊಂಡು ಒಪ್ಪಿಗೆ ನೀಡುತ್ತಿದ್ದೇನೆ".
